alex Certify ರಾಜ್ಯ ಸರ್ಕಾರದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆAಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು https://labour.ambedkarsahayahasta.in/api/Account/Login ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಯೋಜನೆಯ ಸೌಲಭ್ಯ ಪಡೆಯಲು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು. ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್ಐ/ಪಿಎಫ್ ಸೌಲಭ್ಯ ಹೊಂದಿರಬಾರದು.

ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ ರೂ. 1.00 ಲಕ್ಷಗಳವರೆಗೆ , ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...