alex Certify BIG NEWS : ರಂಜಾನ್ ಹಿನ್ನೆಲೆ ಉರ್ದು ಶಾಲೆ ವೇಳಾಪಟ್ಟಿ ಬದಲಾವಣೆ : ರಾಜ್ಯ ಸರ್ಕಾರ ಆದೇಶ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಂಜಾನ್ ಹಿನ್ನೆಲೆ ಉರ್ದು ಶಾಲೆ ವೇಳಾಪಟ್ಟಿ ಬದಲಾವಣೆ : ರಾಜ್ಯ ಸರ್ಕಾರ ಆದೇಶ ಆದೇಶ

 

ಬೆಂಗಳೂರು : ರಂಜಾನ್‌ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ.

ಉಲ್ಲೇಖಿತ-2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ:31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ( Standing Order ) ನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ.

ಈ ಹಿನ್ನಲೆಯಲ್ಲಿ ಈ ಬಗ್ಗೆ ಕಛೇರಿಗೆ ಸಲ್ಲಿಸಲಾಗಿರುವ ಮನವಿಗಳನ್ನು ಪರಿಶೀಲಿಸಿ. ಈ ಕೆಳಗಿನಂತೆ ಆದೇಶಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...