ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉಪಸಮಿತಿಗೆ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಡಾ.ಎಂ.ಸಿ. ಸುಧಾಕರ್ ಸದಸ್ಯರಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತೀವ್ರ ನಿಗಾವಹಿಸಿ ಸಕಾಲಿಕ ನಿರ್ಣಯ ತೆಗೆದುಕೊಳ್ಳಲು ಸರ್ಕಾರ ಈ ಕ್ರಮ ವಹಿಸಿದೆ.