ಬೆಂಗಳೂರು : ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಪಿಎಂಇ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಆದೇಶವನ್ನು ಹೊರಡಿಸಿದ್ದು, ನೋಂದಣಿಯನ್ನು ಕಡ್ಡಾಯಗೊಳಿಸಿದೆ.
ನಕಲಿ ವೈದ್ಯರು ಕ್ಲಿನಿಕ್ ಹಾಗೂ ಪ್ರಯೋಗಾಲಯ ತೆರೆದಿರುವುದು ಪತ್ತೆಯಾದ್ರೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಬೇಕು. ನಡೆಸುತ್ತಿರುವ ನಕಲಿ ವೈದ್ಯರುಗಳ ಬಗ್ಗೆ ಕಡ್ಡಾಯವಾಗಿ ಕೆಪಿಎಂ ನೋಂದಣಿ ಮತ್ತು ಕುಂದು ಕೊರತೆ ನಿವಾರಣೆ ಪ್ರಾಧಿಕಾರದಲ್ಲಿ ನಿರ್ಧರಿಸಿ ಮುಂದಿನ ಕ್ರಮಕ್ಕಾಗಿ ವೈಯಕ್ತಿಕ ಕ್ರಿಮಿನಲ್ ದೂರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಸಲ್ಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.