ಬೆಂಗಳೂರು : ರಾಜ್ಯ ಸರ್ಕಾರವು ಬರ ನಿರ್ವಹಣೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಬರಪೀಡಿತ 223 ತಾಲೂಕುಗಳಲ್ಲಿ ಪರಿಹಾರ ಕಾರ್ಯಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಾಪಡೆ ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಖಾಸಗಿ ಕೊಳವೆ ಬಾವಿ ಬಳಸಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ವ್ಯವಸ್ಥೆ ಮಾಡಲಾಗಿದೆ. 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ರೈತರಿಗೆ ವಿತರಿಸಲಾಗುತ್ತಿದೆ. ಗಡಿ ಜಿಲ್ಲೆಗಳಿಂದ ಮೇವು ಸಾಗಣೆ ನಿಲ್ಲಿಸಲು, ರಾಜ್ಯದಿಂದ ಹೊರ ರಾಜ್ಯಗಳಿಗೆ ಹೋಗುವುದನ್ನು ನಿರ್ಬಂಧಿಸಲು ನಿರ್ಣಯಿಸಲಾಗಿದೆ ಎಂದು ಹೇಳಿದ್ದಾರೆ.
ಬರಪೀಡಿತ 223 ತಾಲ್ಲೂಕುಗಳಲ್ಲಿ ಪರಿಹಾರ ಕಾರ್ಯಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ. ಪರಿಹಾರ ಕಾರ್ಯಗಳಿಗೆ 325 ಕೋಟಿ ಹೆಚ್ಚುವರಿ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 3783 ಕೋಟಿ ಲಭ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.