alex Certify ಗಮನಿಸಿ…! ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ಎರಡು, ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಉತ್ತರ ನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ.

ಇದೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಮಳೆ ಮುನ್ಸೂಚನೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...