ಬೆಂಗಳೂರು: ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಬಹುತೇಕ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ರಣಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿದೆ. ಉತ್ತರ ಕರ್ನಾಟಕದಲ್ಲಿ ಧಾರವಾಡ ಹೊರತುಪಡಿಸಿ 10 ಜಿಲ್ಲೆಗಳಲ್ಲಿ ಮೇ 5ರವರೆಗೆ 5 ದಿನ ಹೆಚ್ಚಿನ ಪ್ರಮಾಣದಲ್ಲಿ ಬಿಸಿ ಗಾಳಿ ಬೀಸುವ ಸಂಭವ ಇದೆ.
ದಕ್ಷಿಣ ಕರ್ನಾಟಕದ 17 ಜಿಲ್ಲೆಗಳ ಪೈಕಿ 7 ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ. ಮೇ 6 ರಿಂದ ಎರಡು ದಿನಗಳ ಕಾಲ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಮುಂದಿನ 24 ಗಂಟೆಯಲ್ಲಿ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಕೊಡಗು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.