ಬೆಂಗಳೂರು : ಯುವ ಸಮೃದ್ಧಿ ಸಮ್ಮೇಳನದ ರಾಜ್ಯಮಟ್ಟದ ಉದ್ಯೋಗ ಮೇಳದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು/ಅಭ್ಯರ್ಥಿಗಳು ನೋಂದಣಿ ಹಾಗೂ ಪಾಲ್ಗೊಳ್ಳುವ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಸೂತ್ತೋಲೆ ಹೊರಡಿಸಿದೆ.
ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರ ಸೂಚನೆಯ ಮೇರೆಗೆ ಮಾನ್ಯ ಸಚಿವರು, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅವರ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯಿಸಿಲಾಗಿರುವಂತೆ ಬೆಂಗಳೂರು ನಗರ ಜಿಲ್ಲೆಯ ಅರಮನೆ ಮೈದಾನದಲ್ಲಿ ದಿನಾಂಕ:26.02.2024 ಮತ್ತು 27.02.2024 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಲು ತೀರ್ಮಾನಿಸಲಾಗಿರುತ್ತದೆ.
ಯುವ ಸಮೃದ್ಧಿ ಸಮ್ಮೇಳನವಾದ ಈ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಕಾರ್ಯಕ್ರಮದಲ್ಲಿ ರಾಜ್ಯದ ಯುವ ಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉಪಯುಕ್ತವಾಗುವಂತೆ ಹಾಗೂ ರಾಜ್ಯದ ಆಸಕ್ತ ಯುವಜನತೆಯು ಸ್ವಯಂ ಉದ್ಯೋಗಿಗಳಾಗಲು / ಸ್ವಾವಲಂಭಿಗಳಾಗಲು ಅರಿವು ಅರಿಹ ಮೂಡಿಸಿ, ಪ್ರೇರೇಪಿಸಿ, ಜೀವನದಲ್ಲಿ ಭರವಸೆಯ ಬೆಳಕು ಮೂಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು / ಪ್ಲೇಸ್‌ಮೆಂಟ್‌ಲ್ ಅಧಿಕಾರಿಗಳು ಸೂಚನಾ ಫಲಕದಲ್ಲಿ ಪ್ರಕಟಿಸಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಪದವಿ ಮುಗಿಸಿ ಹೊರಗುಳಿದಿರುವ ವಿದ್ಯಾರ್ಥಿಗಳು ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಲು ಅನುವಾಗುವಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.
ವಿ.ಸೂಚನೆ: ಮೇಲ್ಕಂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಕರ್ನಾಟಕ ಸ್ಕಿಲ್ ಕನೆಕ್ಟ್ ಪೋರ್ಟಲ್ (https://skillconnect.kaushalkar.com) 2 3d ಮೇಳ ಐಕಾನ್ ಕ್ಲಿಕ್ ಮಾಡಿ, ಅಭ್ಯರ್ಥಿಗಳ ನೋಂದಣಿ ಐಕಾನ್ ಕ್ಲಿಕ್ ಮಾಡಿ ಅವಶ್ಯ ದಾಖಲಾತಿ | ಮಾಹಿತಿಯನ್ನು ಅಳವಡಿಸುವುದು. ಪದವಿ ಪೂರೈಸದ ವಿದ್ಯಾರ್ಥಿಗಳು ಪದವಿ ಪೂರ್ವ ಅಂಕಪಟ್ಟಿಯನ್ನು ದಾಖಲಿಸುವುದು.