![](https://kannadadunia.com/wp-content/uploads/2023/09/Department-of-Education.jpg)
ಬೆಂಗಳೂರು : 2023-24 ನೇ ಸಾಲಿನ ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ ಸ್ಪರ್ಧೆ’ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಶಾಲಾ ಶಿಕ್ಷಣ ಮಹತ್ವದ ಆದೇಶ ಹೊರಡಿಸಿದೆ.
ವಿಷಯಕ್ಕೆ ಸಂಬಂಧಿಸಿದಂತೆ, 2023-24ನೇ ಸಾಲಿನಲ್ಲಿ ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ ಸ್ಪರ್ಧೆ’ ಕಾರ್ಯಕ್ರಮವನ್ನು ಧಾರವಾಡ ಜಿಲ್ಲೆಯಲ್ಲಿ ದಿನಾಂಕ:29.01.2024 ರಿಂದ 31.01.2024 ಅಥವಾ ದಿನಾಂಕ: 05.02.2024 ರಿಂದ 07.02.2024 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ ಸ್ಪರ್ಧೆ’ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸುವ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ವಿವರವನ್ನು ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಜಿಲ್ಲೆ. ರವರಿಗೆ ಕೂಡಲೇ ಸಲ್ಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ರವರಿಗೆ ತಿಳಿಸಿದೆ.
ರಾಜ್ಯ ಮಟ್ಟದ ಸ್ಪರ್ಧೆಯ ಆಯೋಜಕರು ಜಿಲ್ಲಾ ಮಟ್ಟದ ವಿಜೇತರ ಪಟ್ಟಿಯನ್ನು ಸಂಗ್ರಹಿಸಿ, ಉಲ್ಲೇಖಿತ ಸುತ್ತೋಲೆಯಲ್ಲಿನ ಅಂಶಗಳಂತೆ ನಿಯಮಾನುಸಾರ ಕಾರ್ಯಕ್ರಮವನ್ನು ಆಯೋಜಿಸುವ ಸಂಬಂಧ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿರವರನ್ನು ಖುದ್ದು ಭೇಟಿ ಮಾಡಿ ಚರ್ಚಿಸಿ ದಿನಾಂಕವನ್ನು ನಿಗಧಿಪಡಿಸಿಕೊಂಡು ತುರ್ತು ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದೆ. ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಇಲಾಖೆಯ ವಿವಿಧ ಕಛೇರಿಗಳ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವಿವಿಧ ಸಮಿತಿಗಳನ್ನು ರಚಿಸಿ, ಉತ್ತಮ ರೀತಿಯಲ್ಲಿ ಸಂಘಟಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.
![](https://kannadadunia.com/wp-content/uploads/2024/01/WhatsApp-Image-2024-01-23-at-2.26.21-PM.jpeg)