alex Certify ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಧಾರವಾಡ : 2022-23 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಅ.27 ರಿಂದ ಅ.29 ರವರೆಗೆ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ.

ಧಾರವಾಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು.

ಅ.27 ಮಧ್ಯಾಹ್ನ 1 ಘಂಟೆಯೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ, ತುಮಕೂರು ಇಲ್ಲಿ ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಧಾರವಾಡ ದೂರವಾಣಿ ಸಂಖ್ಯೆ: 0836-2447424 ಸಂಪರ್ಕಿಸಬಹುದೆಂದು ಕಚೇರಿ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...