
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸರ್ವಪಕ್ಷಗಳ ಸಭೆ ನಡೆಯಲಿದೆ. ರಾಜ್ಯಪಾಲರ ನೇತೃತ್ವದಲ್ಲಿ ಸಂಜೆ 4.30 ಕ್ಕೆ ಸರ್ವಪಕ್ಷ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ಅಥವಾ ಕಠಿಣ ಕರ್ಫ್ಯೂ ಜಾರಿ ಕುರಿತಂತೆ ಮತ್ತು ಮಹತ್ವದ ಕ್ರಮಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸೋಂಕು ತೀವ್ರವಾಗಿರುವ ಹಿನ್ನೆಲೆಯಲ್ಲಿ ನಿಯಮ ಜಾರಿಗೆ ತರಲು ತೀರ್ಮಾನ ಕೈಗೊಳ್ಳಲಾಗುವುದು.