alex Certify ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ‘BSY’ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸಚಿವ ಎಂಬಿ ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ‘BSY’ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸಚಿವ ಎಂಬಿ ಪಾಟೀಲ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿ.ಎಸ್ ಯಡಿಯೂರಪ್ಪ ಅವರನ್ನು 2 ಬಾರಿ ಕೆಳಗೆ ಇಳಿಸಿದ್ದಾರೆ. ಅವರನ್ನು ಯಾವ ರೀತಿ ನಡೆಸಿಕೊಂಡರು ಎಂಬುದು ಎಲ್ಲರಿಗೂ ಗೊತ್ತು. ಬಿ.ಎಸ್. ಯಡಿಯೂರಪ್ಪ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಚೆನ್ನಾಗಿ ಬಳಸಿಕೊಳ್ಳಬೇಕು ಎಂದು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಇನ್ನೂಈ, ವಿರೋಧ ಪಕ್ಷದ ನಾಯಕನಾಗಲು ಯತ್ನಾಳ್ ಜಾಕೆಟ್ ಹೊಲಿಸಿಕೊಂಡು ಕುಳಿತಿದ್ದರು. ದೆಹಲಿಯಲ್ಲಿ ತಿಂಗಳುಗಟ್ಟಲೇ ಠಿಕಾಣಿ ಹೂಡಿದ್ದರು. ಆದರೆ ಅವರ ಆಸೆ ಫಲಿಸಲಿಲ್ಲ ಎಂದು ವ್ಯಂಗ್ಯವಾಡಿದರು.

ಶೀಘ್ರವೇ ಬಿಜೆಪಿ ಹಾಗೂ ಜೆಡಿಎಸ್ನಿಂದ ಬಹುತೇಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಲೋಕಸಭಾ ಚುನಾವಣೆ ವೇಳೆಗೆ ಎರಡೂ ಪಕ್ಷಗಳು ಸ್ವಚ್ಛವಾಗುತ್ತವೆ ಎಂದು ಎಂ.ಬಿ. ಪಾಟೀಲ್ ಹೇಳಿದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...