
ಬೆಂಗಳೂರು: ನವೆಂಬರ್ 27ರಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.