ಬೆಂಗಳೂರು: ಲಸಿಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ಸೋಂಕು ತೀವ್ರವಾಗಿ ಹೆಚ್ಚಾಗತೊಡಗಿದೆ.
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ನೆರೆ ರಾಜ್ಯಗಳಲ್ಲಿ ಸೋಂಕು ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ತೀವ್ರ ಏರಿಕೆ ಆತಂಕ ಮೂಡಿಸಿದೆ.
ರಾಜ್ಯದ ಹಲವೆಡೆ ಶಾಲೆ ಮಕ್ಕಳು, ಶಿಕ್ಷಕರಿಗೆ ಸೋಂಕು ತಗುಲಿದೆ. ಇದರಿಂದಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಗಳಿಗೆ ಎಚ್ಚರಿಕೆ ನೀಡಲಾಗಿದೆ. ಲೇಟ್ ನೈಟ್ ಪಾರ್ಟಿಗಳಿಗೆ ನಿರ್ಬಂಧವನ್ನು ಹೇರಲಾಗಿದೆ. ಈ ಬೆಳವಣಿಗೆಗಳ ನಡುವೆ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿರುವ ಪೋಷಕರಿಗೆ ಮತ್ತೆ ಆತಂಕ ಎದುರಾಗಿದೆ ಎನ್ನಲಾಗಿದೆ.