ಬೆಂಗಳೂರು : ರಾಜ್ಯಾದ್ಯಂತ ‘ಹುಕ್ಕಾಬಾರ್’ ಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ ಹುಕ್ಕಾ ಬಾರ್ಗಳನ್ನು ನಿಷೇಧಿಸಲು ಮತ್ತು ತಂಬಾಕು ಉತ್ಪನ್ನಗಳನ್ನು ಖರೀದಿಸುವ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹುಕ್ಕಾ ಬಾರ್ ನಿಷೇಧಿಸಿ ಇದಕ್ಕಾಗಿ ಪ್ರತ್ಯೇಕ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ಶಾಲಾ-ಕಾಲೇಜು ವ್ಯಾಪ್ತಿಯಿಂದ 100 ಮೀಟರ್ವರೆಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಈಗ ಇದನ್ನು ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆಗಳ ವ್ಯಾಪ್ತಿಗೂ ಅನ್ವಯಿಸಲು ಸರ್ಕಾರ ಚಿಂತನೆ ನಡೆಸಿದೆ.
ಸದ್ಯ, 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ತಂಬಾಕು ಉತ್ಪನ್ನಗಳ ಖರೀದಿ ಮತ್ತು ಸೇವನೆಗೆ ಅವಕಾಶ ನೀಡಲಾಗಿದೆ. ಇದನ್ನು 21 ವರ್ಷಕ್ಕೆ ಏರಿಕೆ ಮಾಡಲು ಕೂಡ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.