alex Certify ಗಮನಿಸಿ…! ನಾಳೆಯಿಂದ ಏಪ್ರಿಲ್ 10 ರವರೆಗೆ ರಾಜ್ಯದ ಹಲವೆಡೆ ಮಳೆ –ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ನಾಳೆಯಿಂದ ಏಪ್ರಿಲ್ 10 ರವರೆಗೆ ರಾಜ್ಯದ ಹಲವೆಡೆ ಮಳೆ –ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 6 ರಂದು ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ.

ಏಪ್ರಿಲ್ 7 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆಯಾಗಲಿದೆ.

ಏಪ್ರಿಲ್ 8 ರಂದು ಕರಾವಳಿ ಹಾಗೂ ಮಲೆನಾಡಿನ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆಯಾಗಲಿದೆ.

ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ.

ಏಪ್ರಿಲ್ 10 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 7 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಒಣಹವೆ ಇರಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...