alex Certify BIG NEWS: ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ; ಕುತೂಹಲ ಕೆರಳಿಸಿದ ಹಣಕಾಸು ಸಚಿವರ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ; ಕುತೂಹಲ ಕೆರಳಿಸಿದ ಹಣಕಾಸು ಸಚಿವರ ಹೇಳಿಕೆ

ಕೇಂದ್ರ ಸರ್ಕಾರ, 2019ರಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ಇದನ್ನು ಜಮ್ಮು ಕಾಶ್ಮೀರ ಹಾಗೂ ಲಡಾಕ್ ಎಂದು ಎರಡು ಭಾಗ ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಇದೀಗ ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ನೀಡಲಾಗುತ್ತದಾ ಎಂಬ ಕುತೂಹಲ ಈಗ ಮೂಡಿದೆ.

ಇದಕ್ಕೆ ಕಾರಣವಾಗಿರುವುದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಹೇಳಿಕೆ. ನವದೆಹಲಿಯಲ್ಲಿ ನಡೆದ ಸಮಾವೇಶ ಒಂದರಲ್ಲಿ ಮಾತನಾಡುವ ವೇಳೆ ಅವರು ಈ ಸುಳಿವು ನೀಡಿದ್ದಾರೆ. ಜಮ್ಮು ಕಾಶ್ಮೀರವನ್ನು ರಾಜ್ಯವನ್ನಾಗಿ ಮಾಡಲಿದ್ದು, ಆದರೆ ಯಾವುದೇ ವಿಶೇಷ ಸ್ಥಾನಮಾನ ನೀಡುವುದಿಲ್ಲ ಎನ್ನಲಾಗಿದೆ.

ಸಮಾವೇಶದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ರಾಜ್ಯಗಳಿಗೆ ನೀಡುತ್ತಿದ್ದ ತೆರಿಗೆಯ ಪಾಲನ್ನು ಶೇಕಡ 42 ರಿಂದ ಶೇಕಡ 41ಕ್ಕೆ ಇಳಿಕೆ ಮಾಡಲಾಗಿದೆ. ಆದರೆ ಜಮ್ಮು ಕಾಶ್ಮೀರ ಈವರೆಗೆ ರಾಜ್ಯವಾಗಿರಲಿಲ್ಲ. ಆದರೆ ಮುಂದಿನ ದಿನಗಳಲ್ಲಿ ಅದು ರಾಜ್ಯವಾಗಲಿದೆ. ಇದಕ್ಕೆ ಸ್ವಲ್ಪ ಸಮಯ ಹಿಡಿಯಬಹುದು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...