ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿದೆ.ಇದು ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ.
ಯತ್ನಾಳ್ ಹೇಳಿಕೆಗೆ ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್ ರಾವ್ ತಿರುಗೇಟು ನೀಡಿದ್ದು, ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕಫೆ ಸ್ಫೋಟದ ಬಿಜೆಪಿ ಲಿಂಕ್ ಬಗ್ಗೆ ದಿನೇಶ್ ಗುಂಡೂರಾವ್ ಆರೋಪಕ್ಕೆ ಸಂಬಂಧಿಸಿದಂತೆ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿ ದಿನೇಶ್ ಗುಂಡೂರಾವ್ ಮನೆಯಲ್ಲಿಯೇ ಅರ್ಧ ಪಾಕಿಸ್ತಾನವಿದೆ. ಹೀಗಾಗಿ ಸಚಿವರು ರಾಷ್ಟ್ರ ವಿರೋಧಿ ಹೇಳಿಕೆ ನೀಡುವುದು ಅಭ್ಯಾಸವಾಗಿದೆ ಎಂದು ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದರು. ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೈ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.