
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತನ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತ ರಜಿತ್ ಕೊಕ್ಕಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿಯಾಗಿರುವ ರಜಿತ್ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಶ್ಲೀಲವಾಗಿ ನಿಂದಿಸಿ ಮಾತನಾಡಿದ್ದು, ಕಾಂಗ್ರೆಸ್ ಕಾರ್ಯಕರ್ತ ಹಕೀಮ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.