ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ರೈಲ್ವೆ ಮತ್ತು ಆಹಾರ ಖಾತೆ ಸಹಾಯಕ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟಂಬರ್ 15ರಂದು ಬಿಹಾರದ ಬಾಗಲ್ಪೂರದಲ್ಲಿ ವಂದೇ ಭರತ್ ರೈಲು ಸಂಚಾರ ಉದ್ಘಾಟನೆ ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸಚಿವ ರವನೀತ್ ಸಿಂಗ್ ಅವರು ರಾಹುಲ್ ಗಾಂಧಿ ಮತ್ತು ಅವರ ಕುಟುಂಬದವರ ಗೌರವಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ವಿಜಯನಗರ ನಿವಾಸಿ ಎಂ.ವಿ. ರವೀಂದ್ರ ದೂರು ನೀಡಿದ್ದರು. ಈ ಅನ್ವಯ ರವನೀತ್ ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.