alex Certify ಸಿದ್ದರಾಮಯ್ಯ ತಲೆ ಸಂಪೂರ್ಣ ಕೆಟ್ಟಿದೆ: ಸದಾನಂದ ಗೌಡ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ತಲೆ ಸಂಪೂರ್ಣ ಕೆಟ್ಟಿದೆ: ಸದಾನಂದ ಗೌಡ ವ್ಯಂಗ್ಯ

ಬಿಜೆಪಿಯದ್ದು ತಾಲಿಬಾನ್​ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರ ಸಮರ ಮುಂದುವರಿಸಿದೆ.

ಈ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿದ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಸಿದ್ದರಾಮಯ್ಯಗೆ ತಲೆ ಸಂಪೂರ್ಣ ಕೆಟ್ಟಿದೆ ಎಂದು ಹೇಳಿದ್ರು.

ರಾಜಕಾರಣ ಮಾಡುವವರಿಗೆ ಸ್ವಲ್ಪ ತಲೆ ಕೆಟ್ಟಿದ್ರೆ ಪರವಾಗಿಲ್ಲ.ಆದರೆ ಪೂರ್ತಿ ತಲೆ ಕೆಟ್ಟಿರಬಾರದು. ಬಿಜೆಪಿಯದ್ದು ತಾಲಿಬಾನ್ ಆಡಳಿತವಾಗಿದ್ದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನಲ್ಲಿ ಓಡಾಡಲು ಸಾಧ್ಯವಾಗುತ್ತಿತ್ತೇ..? ಇವರ ಕಾಲಿಗೆ ಹಗ್ಗ ಕಟ್ಟಿ ಬೀದಿಯಲ್ಲಿ ಎಳೆದುಕೊಂಡು ಹೋಗ್ತಿದ್ರು. ಇದನ್ನು ಮೊದಲು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡುವುದಲ್ಲ. ಯಾರ್ಯಾರದ್ದು ಏನು ಲೂಸ್​ ಆಗಿದೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ ಸಿದ್ದರಾಮಯ್ಯ ತಲೆ ಲೂಸ್​ ಆಗಿರುವುದಂತೂ ಗ್ಯಾರಂಟಿ ಎಂದು ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಮತಾಂತರದ ವಿಚಾರವಾಗಿಯೂ ಮಾತನಾಡಿದ ಅವರು, ಮತಾಂತರದ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ನಿರ್ಧಾರ ಮಾಡಿದೆ. ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ನೇರವಾಗಿ ಕಾರ್ಯಾಚರಣೆ ನಡೆಸುವಂತೆ ಹೇಳಿದ್ದಾರೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...