ಬೆಂಗಳೂರು: ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಾ ಇದ್ದೀವಿ ಅಷ್ಟೇ ಎಂಬ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿಕೆಗೆ ಸಚಿವರೇ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು, ನಾನೇ ಮೇಧಾವಿ, ನಾನೊಬ್ಬನೇ ಬುದ್ಧಿವಂತನೇ ಹೊರರೂ ಬೇರೆ ಯಾರೂ ಇಲ್ಲ ಎಂದು ಅವರು ತಿಳಿದುಕೊಂಡಿದ್ದಾರೆ. ಅದನ್ನು ತಲೆಯಿಂದ ತೆಗೆದು ಹಾಕಬೇಕು ಎಂದು ಹೇಳಿದ್ದಾರೆ.
ಆ ಮೇಧಾವಿ ಹೇಳಿದಂತೆ ಸರ್ಕಾರ ತೆವಳುತ್ತಿಲ್ಲ ಬಹುಶಃ ಅವರ ಖಾತೆ ಕುಂಟುತ್ತಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು, ಸರ್ಕಾರ ನಡೆಯುತ್ತಿಲ್ಲ. ಮ್ಯಾನೇಜ್ ಮಾಡುತಿದ್ದೇವೆ ಎಂದು ಸಚಿವ ಮಾಧುಸ್ವಾಮಿ ಯಾವ ಮನಸ್ಥಿತಿಯಲ್ಲಿ ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ. ಅಂತಹ ಹೇಳಿಕೆ ನೀಡುವ ಮೊದಲು ಅವರು ಸ್ವಲ್ಪ ಯೋಚಿಸಬೇಕಿತ್ತು ಎಂದು ತಿಳಿಸಿದ್ದಾರೆ.