alex Certify BREAKING: CPI ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಲೈಂಗಿಕ ದೌರ್ಜನ್ಯ ನಡೆದಿಲ್ಲವೆಂದು ಹೇಳಿಕೆ ಬದಲಿಸಿದ ಯುವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: CPI ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಲೈಂಗಿಕ ದೌರ್ಜನ್ಯ ನಡೆದಿಲ್ಲವೆಂದು ಹೇಳಿಕೆ ಬದಲಿಸಿದ ಯುವತಿ

ಚಿತ್ರದುರ್ಗ: ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಾನಸಿಕ ಒತ್ತಡದಿಂದ ದೂರು ನೀಡಿದ್ದೆ ಎಂದು ಯುವತಿ ಹೇಳಿದ್ದಾಳೆ.

ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿ ಮರು ಹೇಳಿಕೆ ದಾಖಲಿಸಿದ್ದಾಳೆ. ಸಿಪಿಐ ಉಮೇಶ್ ಅವರಿಂದ ಲೈಂಗಿಕ ದೌರ್ಜನ್ಯ ನಡೆದಿಲ್ಲವೆಂದು ಮರು ಹೇಳಿಕೆ ನೀಡಿದ್ದಾಳೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಅತ್ಯಾಚಾರದ ಆರೋಪ ಮಾಡಿದ್ದ ಯುವತಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶಿವಮೊಗ್ಗದಲ್ಲಿ ಬಿಎಡ್ ಓದುತ್ತಿದ್ದಾಗ ಅತ್ಯಾಚಾರವೆಸಗಿ ಗರ್ಭಪಾತ ಮಾಡಿರುವುದಾಗಿ ಆರೋಪಿಸಲಾಗಿತ್ತು. ಈಗ ತಮ್ಮ ಹೇಳಿಕೆ ಬದಲಿಸಿದ್ದಾರೆ.

ಉಮೇಶ್ ವಿರುದ್ಧ ಐಪಿಸಿ ಸೆಕ್ಷನ್ 376, 323 ಸೇರಿದಂತೆ ವಿವಿಧ ಸೆಕ್ಷನ್ ಅಡಿ ಚಿತ್ರದುರ್ಗದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಾದ ನಂತರ ಉಮೇಶ್ ನಾಪತ್ತೆಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...