ಬೆಂಗಳೂರು: ಆಗಸ್ಟ್ 21 ರಿಂದ ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಎಚ್ಚರಿಕೆ ನೀಡಿದೆ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ 15 ದಿನ ಗಡುವು ನೀಡಲಾಗಿದೆ.
ಅನುದಾನ ರಹಿತ ಖಾಸಗಿ ಶಾಲೆಗಳ ನವೀಕರಣಕ್ಕೆ ವಿಧಿಸಿದ ಷರತ್ತುಗಳಲ್ಲಿ ಇರುವ ಗೊಂದಲಗಳನ್ನು ಸರಿಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ. 15 ದಿನಗಳೊಳಗೆ ಬೇಡಿಕೆ ಈಡೇರಿಸದಿದ್ದರೆ ಆಗಸ್ಟ್ 21ರಿಂದ ರಾಜ್ಯಾದ್ಯಂತ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.
ರುಪ್ಸಾ ಅಧ್ಯಕ್ಷ ಡಾ. ಹಾಲನೂರು ಲೇಪಾಕ್ಷಿ ಈ ಬಗ್ಗೆ ಮಾಹಿತಿ ನೀಡಿದ್ದು, ಖಾಸಗಿ ಶಾಲೆಗಳ ಅಭಿವೃದ್ಧಿಯನ್ನು ಶಾಲಾ ಶಿಕ್ಷಣ ಇಲಾಖೆ ಕಡೆಗಣಿಸುತ್ತಿದೆ. ಖಾಸಗಿ ಶಾಲೆಗಳನ್ನು ನವೀಕರಣಕ್ಕೆ ಶಿಕ್ಷಣ ಇಲಾಖೆ ನಿಗದಿಪಡಿಸಿದ 64 ಅಂಶಗಳು ಅವೈಜ್ಞಾನಿಕವಾಗಿವೆ. ಕೂಡಲೇ ಷರತ್ತುಗಳನ್ನು ಸರಳೀಕರಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.