ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ‘ ಶಾಸಕರಿಗೆ ಸರ್ಕಾರ ಸರಿಯಾಗಿ ಅನುದಾನ ಕೊಡುತ್ತಿಲ್ಲ, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. , ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.
ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದೆ . ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ, ಪ್ರತಿಭಟನೆ ಮೂಲಕ ಸರ್ಕಾರವನ್ನು ಎಚ್ಚರಿಸಲು ನಾವು ಸಿದ್ದರಾಗಿದ್ದು, ನಾಳೆ 15-20 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ ಎಂದರು.ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ. ಯಾವೊಬ್ಬ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ಎಲ್ಲಾ ಶಾಸಕರ ಜೊತೆ ನಾನು ಮಾತನಾಡಿದ್ದೇನೆ ಎಂದರು.
ಸನಾತನ ಧರ್ಮದ ವಿವಾದದ ಬಗ್ಗೆ BSY ಹೇಳಿದ್ದೇನು..?
ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಪರಮೇಶ್ವರ್ ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ. ರಾಷ್ಟ್ರಗೀತೆಯ ಅಂತ್ಯದಲ್ಲಿ ‘ಜೈ ಹಿಂದ್’ ಎನ್ನುವ ಜಯಘೋಷ, ನಮ್ಮ ತಾಯ್ನೆಲ, ಇಲ್ಲಿನ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ರಾಷ್ಟ್ರಧರ್ಮ, ಜೀವನ ಪದ್ಧತಿಯ ಸಂಕೇತವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಹೊಣೆಗೇಡಿತನದ ಮಾತುಗಳನ್ನಾಡಿ ಪರಮೇಶ್ವರ್ ಅವರು ತಮ್ಮ ಘನತೆಗೆ ತಾವೇ ಕುಂದು ತಂದುಕೊಂಡಿದ್ದಾರೆ. ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಘಾಸಿಯುಂಟು ಮಾಡುವ, ರಾಷ್ಟ್ರದ ಅಸ್ಮಿತೆಯಂತಹ ವಿಷಯಗಳ ಬಗ್ಗೆ ತಿಳಿದುಕೊಳ್ಳದೆ, ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.