ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಬಿಗಿ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ವೆಬ್ ಕಾಸ್ಟಿಂಗ್ ಮೂಲಕ ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಲಿದ್ದಾರೆ. ಈ ಮೂಲಕ ಯಾವುದೇ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.
ಈ ವರ್ಷ 8.96 ಲಕ್ಷ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭವಾಗಲಿದ್ದು, 9ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ತಲುಪಿ ತಮ್ಮ ನೋಂದಣಿ ಸಂಖ್ಯೆ ಯಾವ ಕೊಠಡಿಯಲ್ಲಿ ದಾಖಲಾಗಿದೆ ಎನ್ನುವುದನ್ನು ಪರೀಕ್ಷೆ ಕೇಂದ್ರದ ಆವರಣದಲ್ಲಿ ಪ್ರಕಟಿಸಿರುವ ಮಾಹಿತಿ ಫಲಕದಲ್ಲಿ ನೋಡಿಕೊಳ್ಳಿ. ಮನೆಯಿಂದ ಹೊರಡುವಾಗ ತಪ್ಪದೆ ಹಾಲ್ ಟಿಕೆಟ್, ನೀಲಿ ಬಾಲ್ ಪಾಯಿಂಟ್ ಎರಡು ಮೂರು ಪೆನ್ನುಗಳನ್ನು ತೆಗೆದುಕೊಂಡು ಹೋಗಿ. ಯಾವುದೇ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಬೇಡಿ.
ಎಲ್ಲೆಡೆ ಸುಗಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 2818 ಸ್ಥಾನಿಕ ದಳ, ಜಿಲ್ಲಾ ಹಂತದಲ್ಲಿ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣಾ ದಳ ವೆಬ್ ಕಾಸ್ಟಿಂಗ್, ಸಿಸಿ ಕ್ಯಾಮೆರಾ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಸೇರಿದಂತೆ ಸುಗಮವಾಗಿ ಪರೀಕ್ಷೆ ನಡೆಸಲು ಹಲವು ಬಿಗಿ ಕ್ರಮ ಕೈಗೊಳ್ಳಲಾಗಿದೆ.