ಮಡಿಕೇರಿ: ಮಡಿಕೇರಿಯಲ್ಲಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾನೆ. ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆಗೆ ಬಸ್ ಡಿಕ್ಕಿ ಹೊಡೆಸಿದ್ದು, ಪ್ರತಿಮೆಗೆ ಹಾನಿಯಾಗಿದೆ.
ಮಡಿಕೇರಿಯ ಹಳೆ ಬಸ್ ನಿಲ್ದಾಣದ ಬಳಿ ಇರುವ ದೇವಯ್ಯ ಪ್ರತಿಮೆಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಪ್ರತಿಮೆಯ ಅಡಿಗಲ್ಲಿಗೆ ಭಾಗಶಃ ಹಾನಿಯಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.
ಸರ್ಕಾರಿ ಬಸ್ ಚಾಲಕನ ವಿರುದ್ಧ ನಗರ ಸಂಚಾರ ಠಾಣೆಗೆ ದೂರು ನೀಡಲಾಗಿದೆ. ನಾಲ್ಕು ದಿನದ ಹಿಂದೆಯಷ್ಟೇ ಜನರಲ್ ತಿಮ್ಮಯ್ಯ ಪ್ರತಿಮೆಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಜನರಲ್ ತಿಮ್ಮಯ್ಯನವರ ಪ್ರತಿಮೆ ಉರುಳಿ ಬಿದ್ದಿತ್ತು.