ಬೆಂಗಳೂರು: ರಾಜ್ಯದ ಪ್ರತಿ ಕಾಲೇಜಿನಲ್ಲಿಯೂ ಸ್ವಾತಂತ್ರ್ಯ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣ, ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಾಪಿಸಲು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ವತಿಯಿಂದ ದೇವರಾಜ ಅರಸು ವೃತ್ತದ ರಾಯಣ್ಣ ಪ್ರತಿಮೆ ಸಮೀಪ ಹಮ್ಮಿಕೊಂಡಿದ್ದ 192ನೇ ಸ್ಮರಣೋತ್ಸವ ಅಂಗವಾಗಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಮಕ್ಕಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನು ಗುರುತಿಸುವ ಕೆಲಸವಾಗಬೇಕು. ಯಾರು ನಿಜವಾಗಿಯೂ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಸ್ವಾತಂತ್ರ್ಯಕ್ಕೆ ಹೋರಾಡಿದರು ಎಂಬುದು ತಿಳಿಯಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.