ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಕೌಶಲ್ಯಾಭಿವೃದ್ಧಿ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು. ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ.ಈ ಮೂಲಕ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅದೇ ರೀತಿ ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.ಜನರಿಗೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.