ಶಿವಮೊಗ್ಗ : ಮುಂದಿನ ದಿನಗಳಲ್ಲಿ ಸರ್ಕಾರ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧುಬಂಗಾರಪ್ಪ, ರಾಜ್ಯದಲ್ಲಿ 15 ಕ್ಕಿಂತ ಕಡಿಮೆ ಮಕ್ಕಳು ಇರುವ ಸುಮಾರು 22 ಸಾವಿರ ಶಾಲಗಳಿವೆ. ಕಡಿಮೆ ಮಕ್ಕಳಿರುವ ಶಾಲೆಗಳನ್ನು ಉತ್ತಮ ಶಾಲೆಗಳೊಂದಿಗೆ ಸೇರಿಸಲಾಗುತ್ತದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಎಲ್ಲೆಲ್ಲಿ ಎನ್ ಇಪಿ ಜಾರಿಯಾಗಿದೆಯೋ ಅಲ್ಲೆಲ್ಲ ಹಂತ ಹಂತವಾಗಿ ಮಕ್ಕಳಿಗೆ ತೊಂದರೆಯಾಗಿದೆ. ಅದರ ಬದಲಾಗಿ ಜನರ ಅಪಕ್ಷೇಯಂತೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.