ದಾವಣಗೆರೆ : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಘಟನೆ ಸಂಬಂಧ 18 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
18 ಆರೋಪಿಗಳನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಜಡ್ಜ್ 18 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ಎಮ್ ಸಿಸಿ ಎ ಬ್ಲಾಕ್ ನಲ್ಲಿರುವ ಜಡ್ಜ್ ನಿವಾಸಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆಸಲಾಗಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಗಣಪತಿ ಮೆರವಣಿಗೆ ಸಾಗುವಾಗ ಕಿಡಿಗೇಡಿಗಳು ಕಲ್ಲು ತೂರಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.