
ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಘಟನೆ ನಡೆದಿದೆ.
ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಕಲ್ಲು ತೂರಿದ ಕಿಡಿಗೇಡಿಗಳನ್ನು ಪೊಲೀಸರು ಚದುರಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಎಸ್‌ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಗಣಪತಿ ಮೆರವಣಿಗೆ ಸಾಗುವಾಗ ಕಿಡಿಗೇಡಿಗಳು ಕಲ್ಲು ತೂರಿದ್ದು, ಭದ್ರತೆಯಲ್ಲಿದ್ದ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.