ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ರಾತ್ರಿ ನಡೆದಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಾಳ್ಳ ಮೂರನೇ ಬ್ಲಾಕ್ ನ ಬದ್ರಿಯಾ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ.
ಕಲ್ಲು ಎಸೆದಿದ್ದರಿಂದ ಮಸೀದಿಯ ಗಾಜುಗಳು ಪುಡಿ ಪುಡಿಯಾಗಿವೆ. ಎರಡ್ ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕೃತ್ಯವೆಸಗಿದ್ದಾರೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಕಲ್ಲು ಎಸೆದು ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಮಸೀದಿಯ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.