![](https://kannadadunia.com/wp-content/uploads/2025/02/mysuru.png)
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಮುಸ್ಲಿಂ ಧರ್ಮಗುರು ಎಸ್ಕೇಪ್ ಆಗಿದ್ದಾರೆ.
ಪೊಲೀಸ್ ಠಾಣೆಯ ಮುಂದೆ ಪ್ರಚೋದನಾಕಾರಿ ಭಾಷಣ ಮಾಡಿದ ಮುಸ್ತಾಕ್ ಪರಾರಿಯಾಗಿದ್ದು, ಅವರಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಲ್ಲು ತೂರಿದವರು ಉದಯಗಿರಿ ಪೊಲೀಸ್ ಠಾಣೆ ಅಕ್ಕಪಕ್ಕದ ನಿವಾಸಿಗಳೇ ಆಗಿದ್ದಾರೆ. ಸಿಸಿಟಿವಿ ದೃಶ್ಯಗಳು, ಮೊಬೈಲ್ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ. ಮುಸ್ತಾಕ್ ಸೇರಿ ಹಲವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮುಸ್ತಾಕ್ ಪ್ರಚೋದನಾಕಾರಿ ಭಾಷಣದಿಂದಲೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 13 ಮಂದಿಯನ್ನು ಬಂಧಿಸಲಾಗಿದೆ. 13 ಜನರಿಗೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. 12 ಜನ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಓರ್ವ ಬಾಲಕನನ್ನು ಬಾಲ ಮಂದಿರಕ್ಕೆ ಪೊಲೀಸರು ಕಳುಹಿಸಿದ್ದಾರೆ.