
ತುಮಕೂರು: ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಮೇಲೆ ಕಲ್ಲಿನ ಕಂಬಗಳು ಬಿದ್ದಿದ್ದು, ಅದೃಷ್ಟವಶಾತ್ ಮೂವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ನಾಲ್ಕನೇ ತರಗತಿಯ ಉಲ್ಲಾಸ್, ಕುಶಲ, ಒಂದನೇ ತರಗತಿಯ ಯಶಸ್ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಉಲ್ಲಾಸ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.