ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಈಗಾಗಲೇ ರದ್ದುಗೊಳಿಸಲಾದ ಸೆಕ್ಷನ್ 66ಎಯನ್ನು ಮುಂದುವರಿಸುತ್ತಿರೋದರ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. ಈಗಾಗಲೇ ರದ್ದು ಪಡಿಸಲಾದ ನಿಬಂಧನೆಯ ಅಡಿಯಲ್ಲಿ ಯಾವುದೇ ಕಾರಣಕ್ಕೂ ಪ್ರಕರಣಗಳನ್ನ ದಾಖಲಿಸುವಂತಿಲ್ಲ ಎಂದು ಪತ್ರದ ಮೂಲಕ ಸೂಚನೆ ನೀಡಿದೆ.
ಅಲ್ಲದೇ ರದ್ದುಗೊಳಿಸಲಾದ ಸೆಕ್ಷನ್ 66 ಎ ಅಡಿಯಲ್ಲಿ ಈಗಾಗಲೇ ದಾಖಲಾದ ಪ್ರಕರಣಗಳನ್ನ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಪೊಲೀಸ್ ಇಲಾಖೆಗಳು ಕೂಡಲೇ ಹಿಂಪಡೆಯಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
BIG NEWS: ಜ.15ರೊಳಗೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತದೆ ಎಂಬ ಕಾರಣಕ್ಕೆ 23 ಮಾರ್ಚ್ 2015ರಲ್ಲಿ ಸುಪ್ರೀಂ ಕೋರ್ಟ್ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಬರುವ ಸೆಕ್ಷನ್ 66 ಎಯನ್ನು ರದ್ದು ಮಾಡಿತ್ತು. ಈ ಸೆಕ್ಷನ್ ರದ್ದು ಮಾಡಿದ ಆರು ವರ್ಷಗಳ ಬಳಿಕ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೊಲೀಸರು 66ಎ ನಿಬಂಧನೆಯ ಅಡಿಯಲ್ಲಿ ಪ್ರಕರಣ ದಾಖಲಿಸುತ್ತಿರೋದರ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.