alex Certify BIG NEWS: CBSE ಬೆನ್ನಲ್ಲೇ CISCE 12 ನೇ ತರಗತಿ ಪರೀಕ್ಷೆಯೂ ರದ್ದು, ಫಲಿತಾಂಶಕ್ಕೆ ಸಿದ್ಧತೆ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: CBSE ಬೆನ್ನಲ್ಲೇ CISCE 12 ನೇ ತರಗತಿ ಪರೀಕ್ಷೆಯೂ ರದ್ದು, ಫಲಿತಾಂಶಕ್ಕೆ ಸಿದ್ಧತೆ ಶುರು

ನವದೆಹಲಿ: ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ಇ, ಐಸಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ.

CISCE 12 ನೇ ತರಗತಿ ಪರೀಕ್ಷೆ ಕೂಡ ರದ್ದು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ. ಈಗ ಪಲಿತಾಂಶಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಸಿಬಿಎಸ್ಇ ಮತ್ತು CISCE 12 ನೇ ತರಗತಿ ಫಲಿತಾಂಶಗಳನ್ನು ವಿದ್ಯಾರ್ಥಿಗಳಿಗೆ ನಿಗದಿತ ಸಮಯದೊಳಗೆ ಪಾರದರ್ಶಕ ವ್ಯವಸ್ಥೆಯ ಮೂಲಕ ನೀಡಲಾಗುವುದು.  ತಮ್ಮ ಆಂತರಿಕ ಮೌಲ್ಯಮಾಪನದ ಫಲಿತಾಂಶಗಳಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಪರಿಸ್ಥಿತಿ ತಿಳಿಯಾದ ನಂತರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.

CISCE 12 ನೇ ತರಗತಿ ಪರೀಕ್ಷೆ ರದ್ದು ಮಾಡುವಂತೆ ಅನೇಕ ಸಂಸ್ಥೆಗಳಿಂದ ಬೇಡಿಕೆ ಬಂದಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಕೂಡ ಅರ್ಜಿ ಸಲ್ಲಿಕೆಯಾಗಿದೆ.

16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲ

ಕೇಂದ್ರ ಸರ್ಕಾರ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ನಂತರ, 12 ಲಕ್ಷ ಸಿಬಿಎಸ್ಇ, 4 ಲಕ್ಷ  CISCE ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ಕುರಿತಾದ ಗೊಂದಲವೂ ಬಗೆಹರಿದಿದೆ.

ಕೆಲವು ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಬಹುದಾಗಿದೆ. ಆದರೆ, ಕೇಂದ್ರದ ಈ ನಿರ್ಧಾರವನ್ನು ರಾಜ್ಯಗಳು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಅವರು ಬಯಸಿದರೆ 12 ನೇ ತರಗತಿ ಪರೀಕ್ಷೆಗಳನ್ನು ನಡೆಸಬಹುದು ಅಥವಾ ಪರೀಕ್ಷೆ ರದ್ದು ಮಾಡಿ, ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಬಹುದು. ರಾಜ್ಯಗಳು ಕೂಡ 12 ನೇ ತರಗತಿ ಪರೀಕ್ಷೆ ರದ್ದುಗೊಳಿಸಿದರೆ, ಲಾಭ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...