
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 30,309 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 525 ಸೋಂಕಿತು ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 22,72,374 ಕ್ಕೆ ಏರಿಕೆಯಾಗಿದೆ.
ಇವತ್ತು ಒಂದೇ ದಿನ 58,385 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 16,74,487 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5,75,028 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇದುವರೆಗೆ 22,838 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 298 ಮಂದಿ ಸಾವನ್ನಪ್ಪಿದ್ದಾರೆ. ಇವತ್ತು 8676 ಜನರಿಗೆ ಸೋಂಕು ತಗಲಿದ್ದು, 31,795 ಮಂದಿ ಬಿಡುಗಡೆಯಾಗಿದ್ದಾರೆ. 3,40,965 ಸಕ್ರಿಯ ಪ್ರಕರಣಗಳಿವೆ.
ಬಳ್ಳಾರಿ 28, ಉತ್ತರ ಕನ್ನಡ 22, ಶಿವಮೊಗ್ಗ 15, ತುಮಕೂರು 15, ಮೈಸೂರು 13, ಕೊಪ್ಪಳ 10, ಹಾಸನ 18, ಬೆಂಗಳೂರು ಗ್ರಾಮಾಂತರ 19 ಮಂದಿ ಸೇರಿ ರಾಜ್ಯದಲ್ಲಿಂದು 525 ಸೋಂಕಿತರು ಸಾವನ್ನಪ್ಪಿದ್ದಾರೆ.

