ಗದಗ : ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನಿಗೆ ಗಂಭೀರವಾದ ಗಾಯಗಳಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಹಿರೇಬಜಾರ್ ಬಡಾವಣೆಯಲ್ಲಿ ನಡೆದಿದೆ.
ಪಟ್ಟಣದ ಶಿಬಾಜಿ ಪೇಟೆ ಆದಿ ಪವಾರ್ (8) ಎಂಬ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದೆ. ಏಕಾಏಕಿ ದಾಳಿ ಮಾಡಿರುವ ಬೀದಿನಾಯಿಗಳು. ಬಾಲಕನ ಕಾಲು ಬೆನ್ನಿನ ಭಾಗಕ್ಕೆ ಬಲವಾಗಿ ಕಚ್ಚಿ ಗಾಯಗೊಳಿಸಿದೆ. ತಕ್ಷಣ ಬೀದಿನಾಯಿಗಳ ಗುಂಪುನ್ನು ಓಡಿಸಿ ಸ್ಥಳೀಯರು ಬಾಲಕನನ್ನು ರಕ್ಷಣೆ ಮಾಡಿದ್ದಾರೆ.
ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೀದಿನಾಯಿಗಳು ಬಾಲಕನ ಮೇಲೆ ಎರಗಿ ದಾಳಿ ಮಾಡಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಪುರಸಭೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.