alex Certify 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

ಬೆಂಗಳೂರು: ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಬಾಲಕನ ಮುಖ, ಕೈಗಳನ್ನು ಗಾಯಗೊಳಿಸಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಈ ಘಟನೆ ನಡೆದಿದೆ. ನಾಲ್ಕು ವರ್ಷದ ಬಾಲಕ ಅವಾಜ್ ಭಾಷಾ ಎಂಬ ಬಾಲಕನ ಮೇಲೆ ಬೀದಿನಾಯಿಗಖು ದಾಳಿ ಮಾಡಿವೆ. ಬಾಲಕನ ಮುಖ, ಕೈಗಳನ್ನು ಗಾಯಗೊಳಿಸಿವೆ. ಬೀದಿನಾಯಿಗಳ ದಾಳಿ ಕಂಡು ತಕ್ಷಣ ಸ್ಥಳೀಯರು ಬಾಲಕನನ್ನು ರಕ್ಷಿಸಿದ್ದಾರೆ.

ಗಾಯಾಳು ಬಾಲಕನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...