
ಬೆಳಗಾವಿ: 5 ವರ್ಷದ ಬಾಲಕಿ ಮೇಲೆ ಮೂರು ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದೆ.
ಪ್ರಾವಿಣ್ಯಾ (5) ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿ. ಬಾಲಕಿಯ ಹೊಟ್ಟೆ, ಬೆನ್ನು, ಕಾಲುಗಳಿಗೆ ನಾಯಿಗಳು ಗಂಭೀರವಾಗಿ ಕಚ್ಚಿ ಗಾಯಗೊಳಿಸಿವೆ.
ಗಾಯಾಳು ಬಾಲಕಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಷ್ಟೇ ಇದೇ ಏರಿಯಾದ ಬಲಕನ ಮೇಲೂ ಬೀದಿನಾಯಿಗಳು ದಾಳಿ ನಡೆಸಿದ್ದವು. ಇಷ್ಟಾದರೂ ಪಾಲಿಕೆ ಅಧಿಕಾರಿಗಳು ಬೀದಿನಾಯಿ ಹಾವಳಿ ನಿಯಂತ್ರಿಸಲು ಮುಂದಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.