
ಬೆಳಗಾವಿ: ಇಬ್ಬರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿಯ ನ್ಯೂ ಗಾಂಧಿ ನಗರದಲ್ಲಿ ನಡೆದಿದೆ.
ಆಟವಾಡುತ್ತಿದ್ದ ಪುಟ್ಟ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಮಕ್ಕಳ ಬೆನ್ನು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿವೆ. ನಾಲ್ಕು ವರ್ಷದ ಮೊಹಮ್ಮದ್ ಕೈಫ್, ಹಜಲ್ ಗಂಭೀರವಾಗಿ ಗಾಯಗೊಂಡಿರುವ ಮಕ್ಕಳು.
ಗಾಯಾಳು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ನಗರದಲ್ಲಿ ಒಂದು ವಾರದಲ್ಲಿ ಬೀದಿನಾಯಗಳು 7 ಮಕ್ಕಳ ಮೇಲೆ ದಾಳಿ ನಡೆಸಿವೆ. ಇಷ್ಟಾಗ್ಯೂ ಮಹಾನಗರ ಪಾಲಿಕೆ ಅಧಿಕಾರಿಗಳು ಬೀದಿನಾಯಿಗಳ ನಿಯಂತ್ರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.