
ಬೆಂಗಳೂರು: ಬೀದಿನಾಯಿಗಗಳ ಅಟ್ಟಹಾಸಕ್ಕೆ ಪುಟ್ಟ ಮಕ್ಕಳು ಸೇರಿದಂತೆ 14 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಇಲ್ಲಿನ ಟಿ.ಬಿ.ಸರ್ಕಲ್, ತಾಲೂಕು ಕಚೇರಿ ರಸ್ತೆ, ಕೋರ್ಟ್ ರಸ್ತೆ, ಡಿ ಕ್ರಾಸ್ ಸೇರಿದಂತೆ ಹಲವು ಕಡೆ ಬೀದಿ ನಾಯಿಗಳು ದಾಳಿ ನಡೆಸುತ್ತಿದ್ದು ಜನರು ಓಡಾಡಲು ಭಯಪಡುವ ಸ್ಥಿತಿ ಎದುರಾಗಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ಮಕ್ಕಳು, ಪೋಷಕರ ಮೇಲೆ ನಾಯಿಗಳು ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ಗಾಯಾಳುಗಳು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಬೀದಿನಾಯಿಗಳ ಉಪಟಳಕ್ಕೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.