ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಗಣತಿಗಾಗಿ ನಡೆಸುತ್ತಿರುವ ಸಮೀಕ್ಷೆ ಡಿಸೆಂಬರ್ 20ರಂದು ಮುಕ್ತಾಯವಾಗಲಿದೆ.
ಇದುವರೆಗೆ 23 ಸಾವಿರ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಗಣತಿದಾರರಿಂದ ಮೊಬೈಲ್ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಇದುವರೆಗೆ 23,407 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಡಿಸೆಂಬರ್ 20ರೊಳಗೆ ಹೆಸರು ನೋಂದಾಯಿಸಿಕೊಳ್ಳಲು ಆಯಾ ವಲಯ ಜಂಟಿ ಆಯಕ್ತರ ಕಚೇರಿಗೆ ಭೇಟಿ ನೀಡಬೇಕು. ಡಿಸೆಂಬರ್ 20ರ ನಂತರ ಬಂದವರ ಹೆಸರು ನೋಂದಾಯಿಸುವುದಿಲ್ಲ ಮತ್ತು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ ಎಂದು ಹೇಳಲಾಗಿದೆ.
ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್, ಕುಟುಂಬ ಪಡಿತರ ಚೀಟಿ, ಕುಟುಂಬ ಸದಸ್ಯರ ಮಾಹಿತಿ, ಸ್ವಯಂಘೋಷಣೆ ಪ್ರಮಾಣ ಪತ್ರದೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದೆ.