ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕೆಪಿಟಿಸಿಎಲ್ ಹಾಗೂ ಎಸ್ಕಾಂ ಗಳ ನೌಕರರು ಮಾರ್ಚ್ 16 ರಿಂದ ಅನಿರ್ದಿಷ್ಟ ಮುಷ್ಕರ ಕೈಗೊಂಡಿದ್ದಾರೆ.
ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದಾಗಿ ಕೆಪಿಟಿಸಿಎಲ್ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್.ಹೆಚ್. ಲಕ್ಷ್ಮಿಪತಿ ತಿಳಿಸಿದ್ದಾರೆ. ಮಾರ್ಚ್ 16 ರಿಂದ ಕೆಪಿಟಿಸಿಎಲ್ ಹಾಗೂ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳು, ನೌಕರರು ಕರ್ತವ್ಯ ಬಹಿಷ್ಕರಿಸಿ ಮನೆಯಲ್ಲಿ ಉಳಿದು ಮುಷ್ಕರ ನಡೆಸಲಿದ್ದಾರೆ. ಮುಷ್ಕರ ಆರಂಭವಾಗುವ ಮೊದಲು ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
ವೇತನ ಪರಿಷ್ಕರಣೆಗೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ನಡೆಸುವುದಾಗಿ 14 ದಿನ ಮೊದಲೇ ನೋಟಿಸ್ ನೀಡಲಾಗಿತ್ತು. ಇದುವರೆಗೂ ಸರ್ಕಾರದ ಸ್ಪಂದಿಸಿಲ್ಲ. ಅನಿವಾರ್ಯವಾಗಿ ಮಾರ್ಚ್ 16 ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟ ಮುಷ್ಕರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.