ಬೆಂಗಳೂರು : ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಕಿಡಿಗೇಡಿಗಳು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದಲ್ಲಿ ನಡೆದಿದೆ. ಈ ಬಗ್ಗೆ ಚಾಮರಾಜಪೇಟೆ ಪೊಲೀಸರ ಜೊತೆ ಮಾತನಾಡಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
3 ಹಸುಗಳ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.ಚಾಮರಾಜಪೇಟೆಯ ವಿನಾಯಕನಗರದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ .ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.