ಬೆಂಗಳೂರು : ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಬಗ್ಗೆ ಎಫ್.ಎಸ್.ಎಲ್ ವರದಿ ಬಂದ ತಕ್ಷಣವೇ ಬಹಿರಂಗ ಮಾಡುತ್ತೇವೆ. ಯಾರೇ ಭಾರತದ ವಿರುದ್ಧ ಇದ್ದರೂ, ದೇಶವಿರೋಧಿ ಘೋಷಣೆ ಕೂಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ರಾಜ್ಯಸಭಾ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟಗೊಂಡ ದಿನದಂದು ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದರು.