alex Certify BIG NEWS: ‘ಹಾನಗಲ್ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ತೇವೆ’ : CM ಸಿದ್ದರಾಮಯ್ಯ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಹಾನಗಲ್ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ತೇವೆ’ : CM ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ : ಹಾನಗಲ್ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಇಂದು ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಯಾವುದೇ ಧರ್ಮದವರಾಗಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಈಗ ತಾನೇ ಸಂತ್ರಸ್ತ ಕುಟುಂಬಸ್ಥರು ಅರ್ಜಿಯನ್ನು ಕೊಟ್ಟಿದ್ದಾರೆ. ಸರ್ಕಾರ ಅರ್ಜಿಯನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತದೆ . ಬೆಳಗಾವಿ ಘಟನೆ ಆಗಿರಲಿ, ಯಾವ ಪ್ರಕರಣ ಆಗಿರಲಿ, ಮುಚ್ಚಿ ಹಾಕುವ ಪ್ರಶ್ನೆ ಇಲ್ಲ.ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಯಾರು ತಪ್ಪು ಮಾಡಿದರೆ ಅವರ ವಿರುದ್ಧ ಕಠಿಣವಾದಂತ ಕ್ರಮ ತೆಗೆದುಕೊಳ್ಳುತ್ತೇವೆ. ಸರ್ಕಾರ ಈ ಬಗ್ಗೆ ಪರಿಶೀಲ ನಡೆಸಿ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...