alex Certify ಮೂರು ತಿಂಗಳಿನಿಂದ ಸಿಗದ ವೇತನ: ರಾಜ್ಯಾದ್ಯಂತ ಇಂದು ರಾತ್ರಿಯಿಂದ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಸಜ್ಜಾದ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರು ತಿಂಗಳಿನಿಂದ ಸಿಗದ ವೇತನ: ರಾಜ್ಯಾದ್ಯಂತ ಇಂದು ರಾತ್ರಿಯಿಂದ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಸಜ್ಜಾದ ಸಿಬ್ಬಂದಿ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ.

ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ ಸೇವೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ನೀಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ ಕೇವಲ 13,000 ರೂ. ನೀಡಿದೆ.

ಹೀಗಾಗಿ ಸೋಮವಾರ ಸಂಜೆಯೊಳಗೆ ವೇತನ ಪಾವತಿಸುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದ್ದು, ಕಡಿತಗೊಳಿಸಿದ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ವೇತನ ಪಾವತಿಸದಿದ್ದರೆ ಮೇ 6 ರ ರಾತ್ರಿಯಿಂದ ರಾಜ್ಯವ್ಯಾಪಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘದಿಂದ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...