ರಾಜ್ಯದ ಜನತೆಗೆ ಮುಖ್ಯ ಮಾಹಿತಿ: ನಾಳೆಯಿಂದ ಮುಷ್ಕರ: ವಿದ್ಯುತ್ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಪಿಟಿಸಿಎಲ್ ಮತ್ತು ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ನೌಕರರು ಮಾರ್ಚ್ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ವಿದ್ಯುತ್ ಸಂಬಂಧಿತ ಸೇವೆಗಳಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ.

ಲೈನ್ ಮ್ಯಾನ್ ಗಳಿಂದ ಹಿಡಿದು ಇಂಜಿನಿಯರ್ ಗಳ ವರೆಗೆ ಸುಮಾರು 60 ಸಾವಿರಕ್ಕೂ ಅಧಿಕ ನೌಕರರು ಮುಷ್ಕರದಲ್ಲಿ ಭಾಗವಹಿಸಲಿದ್ದು, ತಾಂತ್ರಿಕ ದೋಷ, ಗ್ರಾಹಕರ ಕುಂದು ಕೊರತೆ ಪರಿಹಾರ ಸೇರಿದಂತೆ ಹಲವು ಕಾರ್ಯಗಳನ್ನು ನಿರ್ವಹಿಸುವುದಿಲ್ಲ. ಹೀಗಾಗಿ ವಿದ್ಯುತ್ ಪೂರೈಕೆ, ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ, ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಷ್ಕರ ಕೈಗೊಳ್ಳಲಾಗಿದೆ. ಕೆಪಿಟಿಸಿಎಲ್ ಮತ್ತು ಎಸ್ಕಾಂ ನೌಕರರು ಮುಷ್ಕರ ಕೈಗೊಂಡ ಕಾರಣ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಆಸ್ಪತ್ರೆ, ವೈದ್ಯಕೀಯ ಸಂಸ್ಥೆ, ನೀರು ಸರಬರಾಜು ಸ್ಥಾವರಗಳಿಗೆ ತಾಂತ್ರಿಕ ಸೇವೆ ಮುಂದುವರೆಯಲಾಗುವುದು. ಇತರೆ ವಲಯಕ್ಕೆ ಸೇವೆ ನೀಡಲಾಗುವುದಿಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read